- ಅಪ್ರಾಪ್ತೆಯನ್ನಗರ್ಭಿಣಿ ಮಾಡಿದ ಯುವಕ
- ಅತ್ಯಾಚಾರಿಯನ್ನ ಬಂಧಿಸಿದ ಪೊಲೀಸರು
- ಪೊಲೀಸರಿಂದ ತಪ್ಪಿಸಿಕೊಳ್ಳಲು ಮುಂದಾದಾಗ ಗುಂಡೇಟು
ಧಾರವಾಡ : ವಿದ್ಯಾರ್ಥಿ ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಅಹಿತಕರ ಘಟನೆ ಬೆಳಕಿಗೆ ಬಂದಿದೆ. ಸದ್ದಾಂ ಹುಸೇನ್ ಎಂಬಾತ 16 ವರ್ಷದ ಬಾಲಕಿಯನ್ನು ಅತ್ಯಾಚಾರ ಮಾಡಿ ಗರ್ಭಿಣಿ ಮಾಡಿದ್ದನು. ಈ ವಿಚಾರ ತಿಳಿದಂತೆ ಎಸ್ಕೇಪ್ ಆಗಿದ್ದ. ಈಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಸ್ಥಳಾಂತರಿಸುವ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆರೋಪಿ ಮೇಲೆ ಫೈರಿಂಗ್ ಮಾಡಿದ್ದಾರೆ.
ಆರೋಪಿ ಸದ್ದಾಂ ಹುಸೇನ್ ಹಲ್ಲೆ ಮಾಡಿದ್ದರಿಂದ ವಿದ್ಯಾಗಿರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಗಮೇಶ ಹಾಗೂ ಕಾನ್ಸ್ಟೇಬಲ್ ಅರುಣ್ ಅವರಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಸದ್ದಾಂ ಹುಸೇನ್ನನ್ನು ಧಾರವಾಡ ಜಿಲ್ಲಾಸ್ಪತ್ರೆ ದಾಖಲಿಸಲಾಗಿದೆ.