ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡಲ್ಲಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಯುವತಿ ಅಂಜಲಿ ಕೊಲೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಪಿ. ರಾಜೀವ್ ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೇಹಾ ಹಾಗೂ ಅಂಜಲಿ ಹತ್ಯೆ ಪ್ರಕರಣದಲ್ಲಿ ಸಾರ್ವಜನಿಕರು ಪೊಲೀಸರ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು. ಗೃಹ ಸಚಿವರು ಮತ್ತು ಹುಬ್ಬಳ್ಳಿ-ಧಾರವಾಡ ಆಯುಕ್ತರು ವರ್ಗಾವಣೆಗಾಗಿ ಸರ್ಕಾರವನ್ನು ಒತ್ತಾಯಿಸಿದ್ದರು. ಇದರಿಂದ ಸರ್ಕಾರ ಮುಜುಗರಕ್ಕೊಳಗಾದ ಬೆನ್ನೆಲ್ಲೇ, ರಾಜ್ಯ ಸರ್ಕಾರ ಕಾನೂನು ಸುವ್ಯವಸ್ಥೆ ಡಿ ಎಸ್ ಪಿ ರಾಜೀವ್ ಅವರನ್ನು ಅಮಾನತು ಮಾಡಿ ದಿಟ್ಟ ಕ್ರಮ ಕೈಕೊಂಡಿದೆ. ಎರಡು ದಿನಗಳ ಹಿಂದೆ ಬೆಂಡಿಗೇರಿ ಪಿಆಯ್ ಸಿ.ಬಿ.ಚಿಕ್ಕೋಡಿ ಹಾಗೂ ರೇಣುಕಾ ಹಾವರಡ್ಡಿ ಕೂಡ ಹುಬ್ಬಳ್ಳಿ-ಧಾರವಾಡ ಆಯುಕ್ತರಾದ ರೇಣುಕಾ ಸುಕುಮಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.