- ಎನ್ಕೌಂಟರ್ ಕಾಯ್ದೆ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ಭೋವಿ ಮಹಾಸಭಾ ಒತ್ತಾಯ
- ಮಕ್ಕಳ ಮೇಲೆ ದೌರ್ಜನ್ಯ ಎಸಗುವ ವ್ಯಕ್ತಿಗಳನ್ನು ಸ್ಥಳದಲ್ಲೇ ಎನ್ಕೌಂಟರ್ ಮಾಡಬೇಕು
- ಸಂತ್ರಸ್ತರಿಗೆ ಮುಖ್ಯಮಂತ್ರಿಗಳ ನಿಧಿಯಿಂದ ಪರಿಹಾರ ನೀಡಬೇಕು
ಹುಬ್ಬಳ್ಳಿ: ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗುವವರ ಮೇಲೆ ಎನ್ಕೌಂಟರ್ ಕಾಯ್ದೆ ಜಾರಿಗೆ ತರಬೇಕೆಂದು ಕರ್ನಾಟಕ ರಾಜ್ಯ ಭೋವಿ ಮಹಾಸಭಾ ಒತ್ತಾಯಿಸಿದೆ.
ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ಹುಬ್ಬಳ್ಳಿಯ ವೀರಾಪುರ ಓಣಿಯ ನಿವಾಸಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೃತ್ಯವನ್ನು ಖಂಡಿಸಿರುವ ಭೋವಿ ಸಮಾಜ, ದೌರ್ಜನ್ಯ ಎಸಗುವ ವ್ಯಕ್ತಿಗಳನ್ನು ಸ್ಥಳದಲ್ಲೇ ಎನ್ಕೌಂಟರ್ ಮಾಡಬೇಕು. ದೌರ್ಜನ್ಯಕ್ಕೊಳಗಾದ ಸಂತ್ರಸ್ತರಿಗೆ ಮುಖ್ಯಮಂತ್ರಿಗಳ ನಿಧಿಯಿಂದ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.