ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯರೊಬ್ಬ ಪುತ್ರಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿಲಾಗಿದೆ. ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ಮೃತ ದುರ್ದೈವಿ. ಪುತ್ರಿ ನೇಹಾಳನ್ನು ಇಂದು (ಏಪ್ರಿಲ್ 18) ಬಿವಿಬಿ ಕಾಲೇಜ್ನಲ್ಲಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸದ್ಯ ಮೃತದೇಹವನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ನನ್ನ ಬಂಧಿಸಿದ್ದಾರೆ.
ಕೊಲೆಯಾದ ನೇಹಾ ಹೀರೆಮಠ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿ, ಈತ ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆಗೈದಿದ್ದಾನೆ.