- ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ
- ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಘಟನೆ
- ಪ್ರೀತಿ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ
ಹುಬ್ಬಳ್ಳಿ : ನೇಹಾ ಹತ್ಯೆ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆಯಾಗಿದೆ. ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ವೀರಾಪೂರ ಓಣಿಯಲ್ಲಿ ಘಟನೆ ನಡೆದಿದೆ. ಅಂಜಲಿ ಅಂಬಿಗೇರ (20) ಕೊಲೆಯಾದ ಯುವತಿ. ವಿಶ್ವ ಅಲಿಯಾಸ್ ಗಿರೀಶ್ ಸಾವಂತ (21) ಎಂಬಾತ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆಂದು ತಿಳಿದುಬಂದಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಗಿರೀಶ್ ಕೊಲೆ ಮಾಡಿದ್ದಾನೆ. ಪ್ರೀತಿಸುವಂತೆ ಅಂಜಲಿ ಹಿಂದೆ ಬಿದ್ದಿದ್ದ ಆರೋಪಿ ಗಿರೀಶ್. ಕೊಲೆ ಮಾಡಿ ಆರೋಪಿ ಗಿರೀಶ್ ಪರಾರಿಯಾಗಿದ್ದಾನೆ.
ವಿಶ್ವ ಎಂಬ ಪಾಗಲ್ ಪ್ರೇಮಿ ಕಳೆದ ಹಲವಾರು ದಿನಗಳಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ, ಆದ್ರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಇಂದು ಬೆಳಂಬೆಳ್ಳಗ್ಗೆ ಅಂಜಲಿ ನಿವಾಸಕ್ಕೆ ತೆರಳಿ, ಮನೆಯ ಕದ ಬಡದಿದ್ದಾನೆ, ಬಾಗಿಲು ತೆಗೆದ ಅಂಜಲಿಗೆ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ವಿಷಯ ತಿಳಿದು ಸ್ಥಳಕ್ಕೆ ಘಂಟಿಕೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.