ನೇಹಾ ಹಿರೇಮಠ ಕೊಲೆಗೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಸೋಮವಾರ ನ್ಯಾಯಾಲಯಕ್ಕೆ ಅಂದಾಜು 483 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಏಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಪ್ರತಿಷ್ಠಿತ ಕಾಲೇಜಿನ ಆವರಣದಲ್ಲಿ ನೇಹಾಳ ಸಹಪಾಠಿ ಸವದತ್ತಿ ಮೂಲದ ಫಯಾಜ್ ಎಂಬಾತ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ್ದ.
ಕೊಲೆಯಾದ ನೇಹಾ ಫಯಾಜ್ನ ಪ್ರೀತಿ ನಿರಾಕರಿಸಿದ್ದಳು. ಇದರಿಂದ ಸಿಟ್ಟಾಗಿದ್ದ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದಾಗಿ ಪೊಲೀಸರ ವಿಚಾರನೆ ವೇಳೆ ಬಾಯಿಬಿಟ್ಟಿದ್ದ. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸೋಮವಾರ ಸಿಐಡಿ ಡಿವೈಎಸ್ಪಿ ಎನ್. ಹೆಚ್ ಪೈಕ್ ಅವರು ಸ್ಥಳೀಯ ಒಂದನೇ ಹೆಚ್ಚುವರಿ ದಿವಾಣೀ ನ್ಯಾಯಾಲಯ ಮತ್ತು 3 ನೇ ಜೆಎಂಎಫ್ಸಿ ಕೋರ್ಟ್ಗೆ ದೋಷಾರೋಪಣ ಪಟ್ಟಿ ಸಲ್ಲಿಸಿದರು.