ರಾಜ್ಯದಲ್ಲಿ ಗೇಮ್ ಚಟಕ್ಕೆ ಮತ್ತೊಂದು ಬಲಿಯಾಗಿದ್ದು, ಆನ್ ಲೈನ್ ಗೇಮ್ ನಿಂದ ಹಣ ಕಳೆದುಕೊಂಡು ಬಿಇ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಶಿರಡಿ ನಗರದಲ್ಲಿರುವ ವಸತಿ ನಿಲಯದಲ್ಲಿ ಬಿಇ ವಿದ್ಯಾರ್ಥಿ ರಾಕೇಶ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ರಾಕೇಶ್ ಪ್ರತಿದಿನ ಆನ್ ಲೈನ್ ಗೇಮ್ ಆಡುತ್ತಿದ್ದ. ಅನ್ ಲೈನ್ ಗೇಮ್ ನಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ ರಾಕೇಶ್ ಮನನೊಂದು ವಸತಿ ನಿಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ವಸತಿ ನಿಲಯಕ್ಕೆ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.