ಹೈದರಾಬಾದ್ : ಲಕ್ನೋ ಸೂಪರ್ ಜೈಂಟ್ಸ್ ತಂಡ ಬುಧವಾರ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ 10 ವಿಕೆಟ್ಳಲ್ಲಿ ಹೀನಾಯ ಸೋಲು ಕಂಡಿತ್ತು. ತಂಡದ ಈ ಕಳಪೆ ಪ್ರದರ್ಶನ ಕಂಡು ಸಿಟ್ಟಿಗೆದ್ದ ಫ್ರಾಂಚೈಸಿ ಮಾಲೀಕ ಸಂಜೀವ್ ಗೋಯೆಂಕಾ ಮೈದಾನದಲ್ಲೇ ನಾಯಕ ರಾಹುಲ್ ಜತೆ ಜಗಳವಾಡಿದ್ದಾರೆ. ಇದರ ವಿಡಿಯೋ ವೈರಲ್ ಆಗಿದೆ.
ಬ್ಯಾಂಟಿಂಗ್ ಮಾತ್ರವಲ್ಲದೆ, ಬೌಲಿಂಗ್ನಲ್ಲಿ ಲಕ್ನೋ ಅತ್ಯಂತ ಕಳಪೆ ಪ್ರದರ್ಶನ ತೋರಿತು. ಈ ಹೀನಾಯ ಸೋಲಿನಿಂದ ಸಿಟ್ಟಿಗೆದ್ದ ಸಂಜೀವ್ ಗೋಯೆಂಕಾ ನಾಯಕ ರಾಹುಲ್ ಅವರೊಂದಿಗೆ ಕೋಪದಿಂದ ಮಾತನಾಡುತ್ತಿರುವುದು ಕಂಡುಬಂದಿದೆ. ಇವರಿಬ್ಬರ ನಡುವೆ ಮಾತುಕತೆ ಏನು ಎಂಬುದು ಸ್ಪಷ್ಟವಾಗಿ ಕೇಳಿಸಿಲ್ಲ. ಆದರೂ ಈ ದೃಶ್ಯ ನೋಡುವಾಗ ಇದು ಸಮಾಧಾನದಿಂದ ಮಾತನಾಡುತ್ತಿರುವುದು ಎಂದು ತಿಳಿಯುತ್ತದೆ. ಇದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.