ರಾಜ್ಯಕ್ಕೆ ಇಂದು ಕರಾಳ ಶನಿವಾರವೇ ಆಗಿದೆ. ನೆಲಮಂಗಲದಲ್ಲಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಮೃತಪಟ್ಟಿದ್ದಾರೆ. ಈ ದುರ್ಘಟನೆಯ ಜೊತೆಗೆ ಮಳವಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆಯೊಂದುಜರುಗಿದೆ. ಮೂವರು ಕಾಲೇಜು ಸ್ನೇಹಿತರು ದುರಂತ ಅಂತ್ಯ ಕಂಡಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಬೋಸೇಗೌಡನದೊಡ್ಡಿಯ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ರಸ್ತೆ ಅಪಘಾತ ಸಂಭವಿಸಿದೆ. ಕಾರು-ಲಾರಿ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊರ್ವನ ಸ್ಥಿತಿ ತೀರಾ ಗಂಭೀರವಾಗಿದೆ.
ಬೆಂಗಳೂರು ಐಐಟಿ ಕಾಲೇಜಿನ ವಿದ್ಯಾರ್ಥಿಗಳು ವೀಕೆಂಡ್ ಹಿನ್ನೆಲೆಯಲ್ಲಿ ತಲಕಾಡು ಪ್ರವಾಸಕ್ಕೆ ಹೊರಟಿದ್ದರು. ರಾಷ್ಟ್ರೀಯ ಹೆದ್ದಾರಿ 209ರಲ್ಲಿ KSRTC ಬಸ್ ಹಿಂದಿಕ್ಕುವ ಭರದಲ್ಲಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಆಗಿದೆ. ಕಾರು-ಲಾರಿ ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಕಾರಿನ ಟೈರ್ಗಳು ಬಿಡಿ ಬಿಡಿಯಾಗಿ ಬೇರೆಯಾಗಿವೆ. ಸ್ಥಳದಲ್ಲೇ ಪ್ರಣವ್, ಆಕಾಶ್, ಆದರ್ಶ್ ಮೃತ ಪಟ್ಟಿದ್ದಾರೆ. ಪೃಥ್ವಿ ಸ್ಥಿತಿ ಗಂಭೀರವಾಗಿದೆ. ಮಳವಳ್ಳಿ ಸಾರ್ವಜನಿಕ ಆಸ್ಪತ್ರೆ ಶವಾಗಾರಕ್ಕೆ ಮೃತರ ಶವಗಳನ್ನು ಇರಿಸಲಾಗಿದೆ. ಗಾಯಗೊಂಡ ಪೃಥ್ವಿಗೆ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.