78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಸಿಎಂ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಾಗುತ್ತದೆ ಎಂಬ ಸುದ್ದಿಗಳನ್ನು ಅಲ್ಲಗಳೆದರು.
ನಮ್ಮ 5 ಗ್ಯಾರಂಟಿಯಿಂದ ಮಾಸಿಕ 4 ರಿಂದ 5 ಸಾವಿರ ಪ್ರತಿ ಫಲಾನುಭವಿ ಕುಟುಂಬಕ್ಕೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಲಭಿಸುತ್ತಿದೆ. ಈ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಭವಿಷ್ಯ ನುಡಿದವರಿಗೆ ರಾಜ್ಯದಲ್ಲಿ ಆರ್ಥಿಕ ಬೆಳವಣಿಗೆಯನ್ನು ಸಾಧಿಸಿ ತೋರಿಸುವ ಮೂಲಕ ನಾವು ಉತ್ತರಿಸಿದ್ದೇವೆ ಎಂದು ತಿಳಿಸಿದರು. ಐದು ಗ್ಯಾರಂಟಿ ಯೋಜನೆಗಳು ಸಂಕಷ್ಟದಲ್ಲಿರುವ ಕುಟುಂಬಗಳಿಗೆ ನೇರ ಆರ್ಥಿಕ ನೆರವು ಸಿಗುತ್ತಿದೆ ಎಂದರು. ಐದು ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.