ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಮಂಗಳವಾರ ಅಧಿಕೃತವಾಗಿ ರಷ್ಯಾದ ಅತ್ಯುನ್ನತ ನಾಗರಿಕ ಗೌರವವಾದ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ಟಲ್ ದಿ ಫಸ್ಟ್-ಕಾಲ್ಡ್ ಗೌರವವನ್ನು ಸ್ವೀಕರಿಸಿದ್ದಾರೆ. ಈ ಪ್ರಶಸ್ತಿಯು ಭಾರತ-ರಷ್ಯಾ ಪಾಲುದಾರಿಕೆಯ ಕಾರ್ಯತಂತ್ರವನ್ನು ಮುನ್ನಡೆಸುವಲ್ಲಿ ಪ್ರಧಾನಿ ಮೋದಿಯವರ ಮಹತ್ವದ ಪಾತ್ರವನ್ನು ಗುರುತಿಸುತ್ತದೆ.
ಅಭಿನಂದನಾ ಸಮಾರಂಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ತಮಗೆ ನೀಡಿದ್ದಕ್ಕಾಗಿ ವ್ಲಾಡಿಮಿರ್ ಪುಟಿನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಈ ಪ್ರಶಸ್ತಿಯನ್ನು ಭಾರತದ ಜನರಿಗೆ ಅರ್ಪಿಸುವುದಾಗಿ ಮೋದಿ ಹೇಳಿದ್ದಾರೆ.