ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಸರಣಿಯ ಮೊದಲೆರಡು ಪಂದ್ಯಗಳು ಮುಗಿದಿವೆ. ಇನ್ನುಳಿದಿರುವುದು ಕೊನೆಯ ಟೆಸ್ಟ್ ಪಂದ್ಯ ಮಾತ್ರ. ಈ ಪಂದ್ಯವು ನವೆಂಬರ್ 1 ರಿಂದ ಶುರುವಾಗಲಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡುವ ಇರಾದೆಯಲ್ಲಿದೆ ಕಿವೀಸ್ ಪಡೆ.
ಇತ್ತ ಮೊದಲೆರಡು ಪಂದ್ಯಗಳಲ್ಲಿ ಸೋತು ಭಾರೀ ಮುಖಭಂಗಕ್ಕೆ ಒಳಗಾಗಿರುವ ಟೀಮ್ ಇಂಡಿಯಾ ಕೊನೆಯ ಮ್ಯಾಚ್ನಲ್ಲಿ ಗೆದ್ದು ಕಂಬ್ಯಾಕ್ ಮಾಡುವ ಇರಾದೆಯಲ್ಲಿದೆ. ಏಕೆಂದರೆ ಈ ಸರಣಿಯ ಬಳಿಕ ಭಾರತವು ಆಸ್ಟ್ರೇಲಿಯಾ ವಿರುದ್ಧ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ತೆರಳಬೇಕಿದೆ. ಅದಕ್ಕೂ ಮುನ್ನ ಜಯದ ಲಯಕ್ಕೆ ಮರಳಬೇಕಾದ ಅನಿವಾರ್ಯತೆಯಿದೆ. ಹೀಗಾಗಿ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡದಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.
ಇದನ್ನೂ ಓದಿ: ಧೋನಿ ಫ್ಯಾನ್ಸ್ಗೆ ಗುಡ್ ನ್ಯೂಸ್; IPL ಆಡುವ ಬಗ್ಗೆ ಸ್ವತಃ ಸ್ಪಷ್ಟನೆ..!
ಮೂರನೇ ಪಂದ್ಯ ಯಾವಾಗ?
ನವೆಂಬರ್ 1 ರಿಂದ 5 ರವರೆಗೆ ಮೂರನೇ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ.
ಎಷ್ಟು ಗಂಟೆಗೆ ಮ್ಯಾಚ್ ಶುರು?
ಈ ಸರಣಿಯ ಮೂರನೇ ಪಂದ್ಯವು ಬೆಳಿಗ್ಗೆ 9.30 ರಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 9 ಗಂಟೆಗೆ ನಡೆಯಲಿದೆ.