ಭಾರತದ ಸ್ಟಾರ್ ಜಾವೆಲಿನ್ ಥ್ರೋ ಅಥ್ಲೀಟ್ ಮತ್ತು ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಕುಟುಂಬಸ್ಥರ ಸಮ್ಮುಖದಲ್ಲಿ ಸೋನಿಪತ್ ಮೂಲದ ಹಿಮಾನಿ ಎಂಬುವವರ ಜೊತೆ ವಿವಾಹವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿದ್ದಾರೆ.
ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನೀರಜ್ ಚೋಪ್ರಾ, ನನ್ನ ಕುಟುಂಬದೊಂದಿಗೆ ಜೀವನದ ಹೊಸ ಅಧ್ಯಾಯ ಆರಂಭಿಸಿದೆ. ಈ ಕ್ಷಣ ನಮ್ಮನ್ನು ಒಟ್ಟಿಗೆ ಸೇರಿಸಿದ ಪ್ರತಿ ಆಶೀರ್ವಾದಕ್ಕೂ ಕೃತಜ್ಞರಾಗಿರುತ್ತೇನೆ. ಪ್ರೀತಿಯಿಂದ ಬಂಧಿತರಾಗಿದ್ದು ಯಾವಾಗಲೂ ಸಂತೋಷವಾಗಿರುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಜೀವನದಲ್ಲಿ ಹೊಸ ಅಧ್ಯಾಯ ಶುರು ಮಾಡುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ನೀರಜ್-ಹಿಮಾನಿ ಎಂಬ ಕ್ಯಾಪ್ಟನ್ ನೀಡಿ ಮದುವೆ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹಿಮಾನಿ ಮೋರ್ ಟೆನಿಸ್ ಆಟಗಾರ್ತಿಯಾಗಿದ್ದು, ಆಗ್ನೆಯ ಲೂಯಿಸಿಯಾನ ವಿಶ್ವವಿದ್ಯಾಲಯದಿಂದ ಶಿಕ್ಷಣ ಪಡೆದಿದ್ದಾರೆ. ಅವರು ಫ್ರಾಂಕ್ಲಿನ್ ಪಿಯರ್ಸ್ ವಿಶ್ವವಿದ್ಯಾಲಯದಲ್ಲಿ ಟೆನಿಸ್ನಲ್ಲಿ ಅರೆಕಾಲಿಕ ಸಹಾಯಕ ತರಬೇತುದಾರರಾಗಿ ಕೆಲಸ ಮಾಡುತ್ತಿದ್ದರು.
ಮೊದಲು ಟೋಕಿಯೋ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಚೋಪ್ರಾ ನಂತರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಗೆದ್ದಿದ್ದರು. ಈ ಮೂಲಕ ಅಥ್ಲೆಟಿಕ್ಸ್ನಲ್ಲಿ ಸತತ 2 ಪದಕ ಗೆದ್ದ ಭಾರತೀಯ ಕ್ರೀಡಾಪಟು ಎನಿಸಿಕೊಂಡಿದ್ದರು. ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ನೀರಜ್ ಚೋಪ್ರಾ 89.45 ಮೀಟರ್ ದೂರ ಜಾವೆಲಿನ್ ಎಸೆದಿದ್ದರು. ನೀರಜ್ ದ್ವಿತೀಯ ಸ್ಥಾನ ಪಡೆದು ಬೆಳ್ಳಿ ಪದಕ ಪಡೆದರು. ಇದಕ್ಕೂ ಮುನ್ನ ನೀರಜ್ ಟೋಕಿಯೊ ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದರು.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ; https://whatsapp.com/channel/0029VafyCqRFnSzHn1JWKi1B