ಬಾಂಗ್ಲಾದೇಶದಲ್ಲಿ ನಡೆಯಬೇಕಿದ್ದ ಮಹಿಳಾ ಟಿ20 ವಿಶ್ವಕಪ್ ಅನ್ನು ಯುಎಇ ದೇಶಕ್ಕೆ ಸ್ಥಳಾಂತರಿಸಲಾಗಿದೆ. ಅಕ್ಟೋಬರ್ 3 ರಿಂದ ಆರಂಭವಾಗಲಿರುವ 10 ತಂಡಗಳ ನಡುವಣ ವುಮೆನ್ಸ್ ಟಿ20 ವರ್ಲ್ಡ್ ಕಪ್ ಟೂರ್ನಿಯು ಅಕ್ಟೋಬರ್ 20 ರವರೆಗೆ ನಡೆಯಲಿದೆ.
ಮಹಿಳಾ ಟಿ20 ವಿಶ್ವಕಪ್ ಅಕ್ಟೋಬರ್ 3 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಯಲ್ಲಿ ಒಟ್ಟು 10 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗ್ರೂಪ್ಗಳಲ್ಲಿ ವಿಂಗಡಿಸಲಾಗಿದ್ದು, ಅದರಂತೆ ಮೊದಲ ಸುತ್ತಿನಲ್ಲಿ ಗುಂಪುಗಳಲ್ಲಿನ ತಂಡಗಳ ನಡುವೆ ಪಂದ್ಯಗಳು ಜರುಗಲಿವೆ. ಇಲ್ಲಿ ಭಾರತ ತಂಡವು ಗ್ರೂಪ್-ಎ ನಲ್ಲಿದ್ದು, ಹೀಗಾಗಿ ಆಸ್ಟ್ರೇಲಿಯಾ, ನ್ಯೂಝಿಲೆಂಡ್, ಪಾಕಿಸ್ತಾನ್ ಮತ್ತು ಶ್ರೀಲಂಕಾ ವಿರುದ್ಧ ಮೊದಲ ಸುತ್ತಿನ ಪಂದ್ಯಗಳನ್ನಾಡಲಿದೆ. ಅದರಂತೆ ಭಾರತ ತಂಡದ ಮೊದಲ ಸುತ್ತಿನ ಪಂದ್ಯಗಳ ವೇಳಾಪಟ್ಟಿ ಈ ಕೆಳಗಿನಂತಿದೆ…
- ಅಕ್ಟೋಬರ್ 4: ಭಾರತ vs ನ್ಯೂಝಿಲೆಂಡ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ- 7:30 IST)
- ಅಕ್ಟೋಬರ್ 6: ಭಾರತ vs ಪಾಕಿಸ್ತಾನ್- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ಮಧ್ಯಾಹ್ನ 3:30 IST)
- ಅಕ್ಟೋಬರ್ 9: ಭಾರತ vs ಶ್ರೀಲಂಕಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)
- ಅಕ್ಟೋಬರ್ 13: ಭಾರತ vs ಆಸ್ಟ್ರೇಲಿಯಾ- ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (ರಾತ್ರಿ 7:30 IST)
ಭಾರತ ತಂಡ: ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೊಡ್ರಿಗಸ್, ರಿಚಾ ಘೋಷ್, ಯಾಸ್ತಿಕಾ ಭಾಟಿಯಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯದ್, ಶ್ರೇಯಾಂಕಾ ಪಾಟೀಲ್, ಸಜನಾ ಸಜೀವನ್.ಮೀಸಲು ಆಟಗಾರ್ತಿಯರು:
ಉಮಾ ಚೆಟ್ರಿ (ವಿಕೆಟ್ ಕೀಪರ್), ತನುಜಾ ಕನ್ವರ್, ಸೈಮಾ ಠಾಕೂರ್.
ಮಹಿಳಾ ಟಿ20 ವಿಶ್ವಕಪ್ ತಂಡಗಳು:
- ಗುಂಪು A : ಆಸ್ಟ್ರೇಲಿಯಾ, ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ.
- ಗುಂಪು B : ಸೌತ್ ಆಫ್ರಿಕಾ, ಇಂಗ್ಲೆಂಡ್, ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಸ್ಕಾಟ್ಲೆಂಡ್.