43 ವರ್ಷಗಳ ನಂತರ ಭಾರತದ ಪ್ರಧಾನಿಯೊಬ್ಬರು ಮೊದಲು ಬಾರಿ ಕುವೈತ್ಗೆ ಭೇಟಿ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಇಂದು ಡಿಸೆಂಬರ್ 21 ಮತ್ತು 22 ರಂದು ಕುವೈತ್ಗೆ ಪ್ರವಾಸದಲ್ಲಿದ್ದಾರೆ. ಕುವೈತ್ನ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ತೆರಳಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಅನಿವಾಸಿ ಭಾರತೀಯರು ಕುವೈತ್ನಲ್ಲಿ ಸ್ವಾಗತ ಕೋರಿದ್ದಾರೆ. ಈ ವೇಳೆ ಅಬ್ದುಲ್ಲಾ ಅಲ್ ಬರೌನ್ ಮತ್ತು ಅಬ್ದುಲ್ ಲತೀಫ್ ಅಲ್ ನೆಸೆಫ್ ಎಂಬುವವರು ಮೋದಿಯನ್ನು ಭೇಟಿಯಾಗಿದ್ದಾರೆ. ಈ ಭೇಟಿ ವೇಳೆ ಪ್ರಧಾನಿ ಮೋದಿ ಅವರಿಗೆ ಅರೇಬಿಕ್ ಭಾಷೆಯಲ್ಲಿ ಅನುವಾದಿಸಿರುವ ರಾಮಾಯಣ ಮತ್ತು ಮಹಾಭಾರತ ಪುಸ್ತಕವನ್ನ ನೀಡಿ ಅದಕ್ಕೆ ಅವರಿಂದ ಸಹಿ ಪಡೆದಿದ್ದಾರೆ. ಈ ವಿಶೇಷವಾದ ಕ್ಷಣದ ವಿಡಿಯೋ ಸಖತ್ ವೈರಲ್ ಆಗಿದೆ.