ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ವಿದೇಶದಿಂದ ರಿಂಗ್ ಗಳಿಗೆ ಕಚ್ಚಾ ಬಂಗಾರವನ್ನು ಅಡಗಿಸಿಕೊಂಡು ಅಖ್ರಮವಾಗಿ ಸಾಗಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೆಐಎಗೆ ಬ್ಯಾಂಕಾಂಕ್ ನಿಂದ ಥಾಯ್ ಏರ್ ಲೈಸ್ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕರನ್ನು ಪರೀಕ್ಷಿಸಿದಾಗ ಸಿಕ್ಕಿಬಿದ್ದಿದ್ದಾರೆ.