- ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
- ಶ್ರೀನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗಾಸನ
ಶ್ರೀನಗರ : ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರ ತೀರದಲ್ಲಿ ಸಾವಿರಾರು ಜನರೊಂದಿಗೆ ಪಾಲ್ಗೊಂಡು ಯೋಗ ಪ್ರದರ್ಶಿಸಿದರು.
ಈ ಬಾರಿ 10 ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ ವಸ್ತು ವಿಷಯದ ಅಡಿಯಲ್ಲಿ ಆಚರಿಸಲಾಗುತ್ತಿದೆ. ವೈಯಕ್ತಿಕ ಮತ್ತು ಸಾಮಾಜಿಕ ಯೋಗಕ್ಷೇಮವನನು ಬೆಳೆಸುವಲ್ಲಿ ಯೋಗದ ಪಾತ್ರವನ್ನು ಎತ್ತಿ ತೋರಿಸುವುದು ಇದರ ಉದ್ದೇಶವಾಗಿದೆ.