- ನಾಳೆ ಐಪಿಎಲ್ 2024 ನ ಫೈನಲ್ ಪಂದ್ಯ
- ಸನ್ರೈಸರ್ಸ್ ಹೈದರಾಬಾದ್ – ಕೋಲ್ಕತ್ತಾ ನೈಟ್ ರೈಡರ್ಸ್ ಸೆಣಸಾಟ
ಚೆನ್ನೈ : ಐಪಿಎಲ್ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣಸಾಡಿದ್ದ ಸನ್ರೈಸರ್ಸ್ ಹೈದರಾಬಾದ್ (SRH) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಮತ್ತೊಮ್ಮೆ ಮುಖಾಮುಖಿಯಾಗಲಿದೆ. ನಾಳೆ ನಡೆಯುವ ಫೈನಲ್ ಪಂದ್ಯದಲ್ಲಿ ಪ್ರಶಸ್ತಿಯನ್ನು ಯಾರ ಖಬ್ಜ ಸೇರಲಿದೆ ಎಂದು ಕಾದುನೋಡಬೇಕು.
ಮೇ 21 ರಂದು ನಡೆದಿದ್ದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಕೆಕೆಆರ್ ತಂಡ ಹೈದರಾಬಾದ್ ವಿರುದ್ಧ 8 ವಿಕೆಟ್ ಅಂತರದ ಗೆಲುವು ಸಾಧಿಸಿತ್ತು. ಲೀಗ್ ಹಂತದ ಪಂದ್ಯದಲ್ಲಿ ಕೆಕೆಆರ್ ತಂಡ ಮೇಲುಗೈ ಸಾಧಿಸಿತ್ತು. ಇದೀಗ ಪೈನಲ್ನಲ್ಲಿ ಕಮಿನ್ಸ್ ಪಡೆ ರಿವೆಂಜ್ ತೆಗೆದುಕೊಂಡು ಈ ಸಲ ಐಪಿಎಲ್ 2024 ನ ಕಪ್ ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದೆ.