- ಮೇ 18ಕ್ಕೆ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್ಸಿಬಿ , ಸಿಎಸ್ಕೆ ಮ್ಯಾಚ್
- ಆರ್ಸಿಬಿ , ಸಿಎಸ್ಕೆ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ
- ರಾಜ್ಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ವಾರ ಪೂರ್ತಿ ಬೆಂಗಳೂರಲ್ಲಿ ಮಳೆಯಾಗಲಿದೆ.
ಕಳೆದ ಒಂದು ವಾರದಿಂದ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವರುಣ ಆರ್ಭಟಿಸುತ್ತಿದೆ. ಆದರೆ ಮೇ 18 ಕ್ಕೆ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಮಧ್ಯೆ ನಡೆಯಬೇಕಿರುವ ಹೈವೋಲ್ಟೇಜ್ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಕಾರಣ ಅಂದು ಕೂಡಾ ಬೆಂಗಳೂರಲ್ಲಿ ಭಾರೀ ಮಳೆ ಆಗಲಿದೆ ಎಂದು ಮೂಲಗಳಿಂದ ಹೇಳಲಾಗುತ್ತಿದೆ.
ರಾಜ್ಯ ಹವಾಮಾನ ಇಲಾಖೆ ನೀಡಿದ ಮುನ್ಸೂಚನೆಯಂತೆ ವಾರ ಪೂರ್ತಿ ಬೆಂಗಳೂರಲ್ಲಿ ಮಳೆಯಾಗಲಿದೆ. ಇದರಿಂದ ಎಂ. ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲೂ ವರುಣನ ಆರ್ಭಟ ಮುಂದುವರೆದರೆ. ಅಂದಿನ ರೋಚಕ ಪಂದ್ಯ ರದ್ದಾಗೊದಂತ್ತು ಪಕ್ಕಾ. ಮೋನ್ನೆ ನಡೆದ ರೋಚಕ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದು ಬೀಗಿದೆ. ಈ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ 7ನೇ ಸ್ಥಾನದಲ್ಲಿದ್ದ ಆರ್ಸಿಬಿ 5ನೇ ಸ್ಥಾನಕ್ಕೆ ಜಂಪ್ ಆಗಿದೆ. ಸದ್ಯ ಸಿಎಸ್ಕೆ ವಿರುದ್ಧ ಗೆದ್ದರೆ ಮಾತ್ರ ಪ್ಲೇ ಆಫ್ಗೆ ಆರ್ಸಿಬಿ ಆಸೆ ಜೀವವಂತ ಅಂದಿನ ಪಂದ್ಯಕ್ಕೆ ವರುಣನ ಒಲುಮೆ ಆರ್ ಸಿ ಬಿ ಗೆ ವರವಾಗುತ್ತಾ? ಅನ್ನೋದು ಯಕ್ಷ ಪ್ರಶ್ನೇ..?