ಐಪಿಎಲ್ ಫೈನಲ್ ಪಂದ್ಯದಲ್ಲಿ ಎಸ್ಆರ್ಹೆಚ್ ವಿರುದ್ಧ ಕೆಕೆಆರ್ ತಂಡ ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಎಸ್ಆರ್ಹೆಚ್ ತಂಡವನ್ನು 8 ವಿಕೆಟ್ಗಳ ಮಣಿಸಿ ಕೆಕೆಆರ್ 3 ನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಎಸ್ಆರ್ಹೆಚ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಎಸ್ಆರ್ಹೆಚ್ ತಂಡಕ್ಕೆ ಓವರ್ನಲ್ಲೇ ಮಿಚೆಲ್ ಸ್ಟಾರ್ಕ್ ಆಘಾತ ನೀಡಿದ್ದರು.
ಮೊದಲ ಓವರ್ನ 5ನೇ ಎಸೆತದಲ್ಲಿ ಅಭಿಷೇಕ್ ಶರ್ಮಾ (2) ರನ್ನು ಕ್ಲೀನ್ ಬೌಲ್ಡ್ ಮಾಡುವ ಮೂಲಕ ಶುಭಾರಂಭ ಮಾಡಿದ್ದರು. ನಂತರ ಟ್ರಾವಿಸ್ ಹೆಡ್ (0) ವೈಭವ್ ಅರೋರಾಗೆ ವಿಕೆಟ್ ಒಪ್ಪಿಸಿದರು. ಪಂದ್ಯದಲ್ಲಿ ಪ್ರಮುಖ 2 ವಿಕೆಟ್ ಕಳೆದುಕೊಂಡ ಎಸ್ಆರ್ಹೆಚ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಕಳೆದುಕೊಂಡಿತು. ಅಂತಿಮವಾಗಿ ಎಸ್ಆರ್ಹೆಚ್ ತಂಡವು 18. 3 ಓವರ್ಗಳಲ್ಲಿ 113 ರನ್ ಗಳಿಸಿ ಆಲೌಟ್ ಆಯಿತು.
114 ರನ್ಗಳ ಗುರಿ ಬೆನ್ನಟ್ಟಿದ್ದ ಕೆಕೆಆರ್ ತಂಡವು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿತು. ಪರಿಣಾಮ ಕೆಕೆಆರ್ ತಂಡವು 10.3 ಓವರ್ಗಳಲ್ಲಿ 114 ರನ್ ಬಾರಿಸಿ ಗೆಲುವು ಸಾಧಿಸಿತು. ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಗೆಲುವು ಸಾಧಿಸುತ್ತಿದ್ದಂತೆ, ಇತ್ತ ಎಸ್ಆರ್ಹೆಚ್ ತಂಡದ ಮಾಲಕಿ ಕಾವ್ಯ ಮಾರನ್ ಬಿಕ್ಕಳಿಸಿ ಆಳುತ್ತಿರುವ ದೃಶ್ಯ ಕಂಡುಬಂದಿತ್ತು. ಇದೀಗ ಎಸ್ಆರ್ಹೆಚ್ ತಂಡದ ಮಾಲಕಿಯ ಕಣ್ಣೀರು ಆಕಿದ ವಿಡಿಯೋ ಸೋಶಿಯಲ್ ಮೀಡಿಯಾದಲಲಿ ವೈರಲ್ ಆಗಿದೆ.