ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ನ ಅಧ್ಯಕ್ಷ ಇಬ್ರಾಹಿಂ ರೈಸಿ, ವಿದೇಶಾಂಗ ವ್ಯವಹಾರಗಳ ಸಚಿವ ಅಮೀರ್ ಅಬ್ದೊಲ್ಲಾಹಿಯಾನ್ ಹಾಗೂ ಕೆಲ ಹಿರಿಯ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ರಾಹಿಂ ರೈಸಿ ಅವರಿದ್ದ ಹೆಲಿಕಾಪ್ಟರ್ ಭಾನುವಾರ ಅಜೆರ್ ಬೈಜಾನ್ ಪ್ರಾಂತ್ಯದ ಗಡಿಯ ಗುಡ್ಡಪ್ರದೇಶಗಳ ವ್ಯಾಪ್ತಿಯಲ್ಲಿ ಅಪಘಾತಕ್ಕಿಡಾಗಿತ್ತು. ಅವರ ಮರಣವನ್ನು ಇರಾನಿಯನ್ನರು ಆಚರಿಸಿದ್ದಾರೆ. ಪಟಾಕಿ ಸಿಡಿಸಿದ ವಿಡಿಯೋಗಳು ವೈರಲ್ ಆಗಿವೆ.