ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಬೆಳಿಗ್ಗೆ 9.19ಕ್ಕೆ ತನ್ನ EOS-8 ಮಿಷನ್ ಯಶಸ್ವಿಯಾಗಿ ಉಡಾವಣೆ ನಡೆಸಿದೆ. ಇದು ಈ ಮಿಷನ್ನ ಮೂರನೇ ಮತ್ತು ಅಂತಿಮ ಅಭಿವೃದ್ಧಿಯ ಹಾರಾಟವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ಉಡಾವಣೆಯನ್ನು ನಡೆಸಲಾಗಿದೆ. ಈ ಮಿಷನ್ನ ಉಡಾವಣೆ SSLV ಯ ಅಭಿವೃದ್ಧಿಯ ಹಂತವನ್ನು ಸೂಚಿಸುತ್ತದೆ.
EOS-8 ಮಿಷನ್ 34-ಮೀಟರ್ ಅಡಿಯಿಂದ ಹಾರಾಟ ನಡೆಸಿದ್ದು ಹಾಗೂ 175.5-ಕಿಲೋಗ್ರಾಂ ಭೂಮಿಯ ವೀಕ್ಷಣಾ ಉಪಗ್ರಹ ಹೊತ್ತುಕೊಂಡು ಉಡಾವಣೆಗೊಂಡಿದೆ. ಇದು ಎಲೆಕ್ಟ್ರೋ-ಆಪ್ಟಿಕಲ್ ಇನ್ಫ್ರಾರೆಡ್ ಪೇಲೋಡ್, ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ರಿಫ್ಲೆಕ್ಟೋಮೆಟ್ರಿ ಪೇಲೋಡ್ ಮತ್ತು ಸಿಲಿಕಾನ್ ಕಾರ್ಬೈಡ್ ನೇರಳಾತೀತ ಡೋಸಿಮೀಟರ್ಗಳನ್ನು ಹೊಂದಿದೆ.
EOS-8 ಮಿಷನ್ನ ಮೊದಲು ಗುರಿ ಅಂದರೆ ವಿಜ್ಞಾನದ ಪ್ರಕಾರ ಇದರ ಪ್ರಾಥಮಿಕ ಉದ್ದೇಶ ಮೈಕ್ರೋಸ್ಯಾಟಲೈಟ್ ಅಭಿವೃದ್ಧಿಪಡಿಸುವುದು ಹಾಗೂ ಮೈಕ್ರೋಸ್ಯಾಟಲೈಟ್ ಉಪಕರಣಕ್ಕೆ ಹೊಂದಿಕೆಯಾಗುವ ಪೇಲೋಡ್ ಯಂತ್ರವನ್ನು ಅಳವಡಿಸುವುದು. ಈ ಮೂಲಕ ಭವಿಷ್ಯದ ಉಪಗ್ರಹಗಳಿಗಾಗಿ ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಬೆಂಗಳೂರಿನಲ್ಲಿರುವ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಈ ಉಪಗ್ರಹವು ಭೂಮಿಯ ಮೇಲೆ ಒಂದು ಕಣ್ಗಾವಲು ಹಾಗೂ ಭೂಮಿಯ ಮೇಲೆ ಆಗುವ ವಿಪತ್ತು ಮೇಲ್ವಿಚಾರಣೆ, ಪರಿಸರ ಮೇಲ್ವಿಚಾರಣೆಯನ್ನು ಮಾಡಿದ ಅದರ ಚಿತ್ರಗಳನ್ನು ಇಸ್ರೋ ಕಳುಹಿಸುತ್ತದೆ.