ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮಲ್ಲಾ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ನಲಗಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೊಪೋರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ನಡೆಸಿವೆ.
ಇದನ್ನು ಓದಿ: ಸೋನು ನಿಗಮ್ ಮತ್ತು ಸಂಜಿತ್ ಹೆಗಡೆ ಜುಗಲ್ ಬಂಧಿ!
ಈ ವೇಳೆ ಗುಂಡಿನ ಚಕಮಕಿ ನಡೆದಿದೆ. ಇಬ್ಬರು ಉಗ್ರರನ್ನು ಮಟ್ಟ ಹಾಕಲಾಗಿದ್ದು, ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.