- ಜಮ್ಮು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಇಬ್ಬರು ಉಗ್ರರ ಹತ್ಯೆ
- ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಓರ್ವ ಯೋಧ ಸಾವು
ಶ್ರೀನಗರ: ಜಮ್ಮು ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಯೋಧರೊಬ್ಬರು ಸಾವನ್ನಪ್ಪಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ 2 ಎನ್ಕೌಂಟರ್ಗಳು ಬೆಳಗಿನ ಜಾವದವರೆಗೂ ನಡೆದಿದೆ. ಅಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ (SPO) ಸೇನಾ ಪೋಸ್ಟ್ನ ಮೇಲಿನ ದಾಳಿಯಲ್ಲಿ ಗಾಯಗೊಂಡಿದ್ದಾರೆ.
ಜಮ್ಮುವಿನಲ್ಲಿ ಈ 2 ಭಯೋತ್ಪಾದಕ ಘಟನೆಗಳು ನಡೆಯುವ ಕೇವಲ 2 ದಿನಗಳ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ರಿಯಾಸಿಯಲ್ಲಿ ದಾಳಿಗೆ ಒಳಗಾಗಿತ್ತು. ಗುಂಡಿನ ದಾಳಿಯಿಂದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಸಾವನ್ನಪ್ಪಿದ್ದರು ಮತ್ತು 30 ಜನ ಗಾಯಗೊಂಡಿದ್ದಾರೆ.