78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯ ಕಚೇರಿ ಜೆ.ಪಿ ಭವನದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಜರುಗಿತು. ಈ ವೇಳೆ ಜೆಡಿಎಸ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರ ಜತೆ ರಾಷ್ಟ್ರಗೀತೆ ಹಾಡಿ ಸಿಹಿ ಹಂಚಿ ಸಂಭ್ರಮಿಸಿದರು. ಪರಿಷತ್ ಸದಸ್ಯರಾಸ ತಿಪ್ಪೇಸ್ವಾಮಿ, ಶರವಣ, ಮುಖಂಡ ರಮೇಶ್ ಗೌಡ ಹಾಗೂ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.