- ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೆನ್ಗೆ ಜಾಮೀನು ಮಂಜೂರು
- ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಬಂಧನದಲ್ಲಿದ್ದ ಹೇಮಂತ್ ಸೊರೆನ್
ಭೂ ಹಗರಣ ಪ್ರಕರಣದಲ್ಲಿ ಜಾರ್ಖಂಡ್ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರಿಗೆ ಅಲ್ಲಿನ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ಜಾರಿ ನಿರ್ದೇಶನಾಲಯ ಜ 31 ರಂದು ಬಂಧಿಸಿತ್ತು. ನಕಲಿ ದಾಖಲೆ ಸೃಷ್ಟಿಸಿ ರಾಂಚಿಯಲ್ಲಿ ಕೋಟ್ಯಂತರ ಮೌಲ್ಯದ 8. 86 ಎಕರೆ ಭೂಮಿಯನನು ಸ್ವಾಧೀನಪಡಿಸಿಕೊಳ್ಳುವ ಯೋಜನೆ ಹೊಂದಲಾಗಿತ್ತು ಎಂದು ಜಾರಿ ನಿರ್ದೇಶನಾಲಯ (ಇಡಿ) ಆರೋಪಿಸಿದೆ.