ಕಲಬುರಗಿ: ರಾಜ್ಯದಲ್ಲಿ 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರವನ್ನು ಕಾಂಗ್ರೆಸ್ ಸರಕಾರ ನೀಡಿಲ್ಲ. ಇದು ರೈತವಿರೋಧಿಗಳ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪ ವ್ಯಕ್ತಪಡಿಸಿದರು.
ಕಲಬುರಗಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಕಮಲಾಪುರದಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ನೆರೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಪರಿಹಾರ ಮೊತ್ತವನ್ನು ಗಮನಾರ್ಹವಾಗಿ ಹೆಚ್ಚಿಸಿ ಕೂಡಲೇ ಬಿಡುಗಡೆ ಮಾಡಿದ್ದರು. ಸಿದ್ದರಾಮಯ್ಯನವರಂತೆ ದೆಹಲಿಯಲ್ಲಿ ಪ್ರತಿಭಟನೆ ಮಾಡಿರಲಿಲ್ಲ ಎಂದು ಟೀಕಿಸಿದರು.