ಸೆಕ್ಯುರಿಟಿ ಗಾರ್ಡ್ನೊಬ್ಬ ಬಾತ್ ರೂಂನಲ್ಲಿದ್ದ ಮಹಿಳೆಯ ವಿಡಿಯೋ ಮಾಡಿರುವ ಘಟನೆ ಕಲಬುರಗಿ ನಗರದ ಅಪಾರ್ಟ್ಮೆಂಟ್ನಲ್ಲಿ ನಡೆದಿದೆ. ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಮಹಿಳೆಯ ವಿಡಿಯೋವನ್ನು ವಿಶ್ವನಾಥ್ ಎಂಬ ಸೆಕ್ಯುರಿಟಿ ಗಾರ್ಡ್ ರೆಕಾರ್ಡ್ ಮಾಡುತ್ತಿರುವುದನ್ನು ಗಮನಿಸಿದ ಮಹಿಳೆ, ತಕ್ಷಣ ಗಂಡನಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಕೂಡಲೇ ಅಪಾರ್ಟ್ಮೆಂಟ್ಗೆ ಆಗಮಿಸಿದ ಮಹಿಳೆಯ ಗಂಡ ಸೆಕ್ಯುರಿಟಿ ಗಾರ್ಡ್ನನ್ನು ಹಿಡಿದು ಥಳಿಸಿದ್ದಾರೆ.
ಅಪಾರ್ಟ್ಮೆಂಟ್ ಅಂಡರ್ ಗ್ರೌಂಡ್ನಲ್ಲಿರುವ ಕಂಬಕ್ಕೆ ಸೆಕ್ಯುರಿಟಿ ಗಾರ್ಡ್ ವಿಶ್ವನಾಥ್ ನನ್ನು ಕಟ್ಟಿ ಹಾಕಿ ಅಪಾರ್ಟ್ಮೆಂಟ್ನ ನಿವಾಸಿಗಳು ಸಹ ಥಳಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.