ಅಮೆರಿಕದಲ್ಲಿ ಚುನಾವಣೆ ರಂಗೇರಿದ್ದು ಅಭ್ಯರ್ಥಿಗಳು ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಈ ಬಾರಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದಾರೆ. ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ 2ನೇ ಬಾರಿಗೆ ಅಧ್ಯಕ್ಷರಾಗುವ ಕನಸು ಕಾಣುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದಿಂದ ಆಹ್ವಾನ ಬಂದಿದೆ.
ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಮೆರಿಕದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಅವರು ತಮ್ಮ ಕುಟುಂಬ ಸಮೇತ ಇಂದು ರಾತ್ರಿ ಅಮೆರಿಕ ಫ್ಲೈಟ್ ಹತ್ತಲಿದ್ದಾರೆ. ಬಳಿಕ ಡಿ.ಕೆ ಶಿವಕುಮಾರ್ ಫ್ಯಾಮಿಲಿ ಅಮೆರಿಕದ ನಾರ್ಥ್ ಕ್ಯಾರೋಲಿನಾದಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಸೆಪ್ಟೆಂಬರ್ 14 ರಂದು ಸ್ವದೇಶಕ್ಕೆ ವಾಪಸ್ ಆಗಲಿದ್ದಾರೆ.
ಈ ಸಲ ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಎಲೆಕ್ಷನ್ನಲ್ಲಿ ಕಮಲಾ ಹ್ಯಾರಿಸ್ ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇವರ ವಿರುದ್ಧ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಅವರು ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಎರಡು ಪಕ್ಷಗಳ ನಡುವೆ ಬಿಗ್ ಫೈಟ್ ಏರ್ಪಟ್ಟಿದೆ. ಕಮಲಾ ಹ್ಯಾರಿಸ್ ಸದ್ಯ ಅಮೆರಿಕದ ಉಪಾಧ್ಯಕ್ಷೆಯಾಗಿದ್ದು ಒಂದು ವೇಳೆ ಎಲೆಕ್ಷನ್ ಅಲ್ಲಿ ಗೆಲುವು ಸಾಧಿಸಿದರೆ ಅಮೆರಿಕದ ಪ್ರೆಸಿಡೆಂಟ್ ಆಗಲಿದ್ದಾರೆ. ಈ ಮೂಲಕ ಭಾರತ ಮೂಲದ ಮಹಿಳೆ ಒಬ್ಬರು ವಿಶ್ವದ ಬಲಿಷ್ಠ ರಾಷ್ಟ್ರದ ಅಧ್ಯಕ್ಷರಾದಂತೆ ಆಗುತ್ತದೆ.