- ಲೋಕಸಭೆ ಚುನಾವಣೆಯ ಫಲಿತಾಂಶ ಜೂನ್ 4 ರಂದು ಪ್ರಕಟ
- ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕದಲ್ಲಿ ಧ್ಯಾನ ಆರಂಭ
- ಧ್ಯಾನ ಆರಂಭಿಸುವ ಮೊದಲು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ
ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನವು ಜೂನ್ 1 ರಂದು ನಡೆಯಲಿದ್ದು, ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಶಿಲಾ ಸ್ಮಾರಕದಲ್ಲಿ 45 ಗಂಟೆಗಳ ಧ್ಯಾನ ಆರಂಭಿಸಿದ್ದಾರೆ. ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ 7 ಗಂಟೆ ಸುಮಾರಿಗೆ ಧ್ಯಾನ ಆರಂಭಿಸಿದ್ದು, ಜೂನ್ 1 ರಂದು ಮುಗಿಸಲಿದ್ದಾರೆ.
ಮೋದಿ ಅವರು ಕೇರಳ ರಾಜಧಾನಿ ತಿರುವನಂತಪುರಂನಿಂದ ಕನ್ಯಾಕುಮಾರಿಗೆ ಆಗಮಿಸಿದರು. ಧ್ಯಾನ ಆರಂಭಿಸುವ ಮೊದಲು ಅವರು ಭಗವತಿ ಅಮ್ಮನ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಮೋದಿ ಅವರು ಧ್ಯಾನ ಮಾಡಲು ಆರಂಭಿಸಿದರು. ಮೋದಿ ಅವರು ಎರಡು ದಿನ ಧ್ಯಾನ ಮಾಡುವ ಹಿನ್ನೆಲೆಯಲ್ಲಿ ಸ್ಮಾರಕದ ಸುತ್ತಲೂ 2 ಸಾವಿರ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.