ಕಾರವಾರ: ಗರ್ಭಿಣಿ ಹಸುವಿನ ತಲೆ ಕಡಿದು ಕೊಂದು ಮಾಂಸ ಕದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಹೊನ್ನಾವಾರ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸಾಲ್ಕೋಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂರು ದಿನಗಳ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಮತ್ತು ಗೋಹಿಂಸೆಯನ್ನು ಸರ್ಕಾರ ಯಾವುದೇ ಕಾರಣಕ್ಕೂ ಬೆಂಬಲಿಸಲ್ಲ. ಗೋ ಹತ್ಯೆಯ ಹಂತಕರು ಯಾರೇ ಆಗಿದ್ದರೂ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ. ಗೋ ಮಾಂಸ ಸಾಗಾಟದ ಜಾಲ ಇದ್ದರೆ ಸಂಪೂರ್ಣ ಮಾಹಿತಿ ಕಲೆ ಹಾಕುವಂತೆ ಗೃಹ ಸಚಿವ ಡಾ. ಜಿ ಪರಮೇಶ್ವರ್ ಸಭೆಯಲ್ಲಿ ಸೂಚನೆ ನೀಡಿದ್ದರು. ಇನ್ನು ಕಾರವಾರ ಘಟನೆ ನಂತರ ತನಿಖೆ ಚುರುಕುಗೊಳಿಸಿದ್ದ ಎಸ್ಪಿ ಎಂ. ನಾರಾಯಣ ನೇತೃತ್ವದ ತಂಡ ಐವರು ಹಂತಕರನ್ನು ಬಂಧಿಸಿದ್ದಾರೆ.
ಹೊನ್ನಾವರ ತಾಲೂಕಿನ ಸಾಲ್ಕೋಡು ಗ್ರಾಮದ ಕೃಷ್ಣ ಆಚಾರಿ ಎಂಬುವವರು ಹಸುವನ್ನು ಮೇಯಲು ಕಾಡಿಗೆ ಬಿಟ್ಟಿದ್ದರು. ಸಂಜೆಯಾದರೂ ಹಸು ಮನೆಗೆ ಬಂದಿರಲಿಲ್ಲ. ಹೀಗಾಗಿ ಹುಡುಕಾಟ ನಡೆಸಿದ್ದಾಗ ಹಸುವನ್ನು ಹತ್ಯೆ ಮಾಡಿರುವ ಕುರುಹು ಪತ್ತೆಯಾಗಿತ್ತು. ಹಸುವನ್ನು ಕೊಂದಿದ್ದ ಹಂತಕರು ಹಸುವಿನ ಹೊಟ್ಟೆಯಲ್ಲಿದ್ದ ಕರುವಿನ ಮಾಂಸವನ್ನು ಹೊತ್ತೊಯ್ದಿದ್ದ ಈ ಘಟನೆ ರಾಜ್ಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ: https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc