ಕಾರ್ಗಿಲ್ ವಿಜಯ್ ದಿವಸದ 25ನೇ ವಾರ್ಷಿಕೋತ್ಸವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ನಲ್ಲಿದ್ದಾರೆ. ಕಾರ್ಗಿಲ್ ಯುದ್ಧದ 25 ನೇ ವಾರ್ಷಿಕೋತ್ಸವದಂದು ಲಡಾಖ್ಗೆ ಭೇಟಿ ನೀಡಿದ ಪ್ರಧಾನಿ ಮೋದಿಯವರು, ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹೋರಾಡಿ ವೀರಮರಣವನ್ನು ಕಂಡ ಯೋಧರ ಸ್ಮಾರಕಕ್ಕೆ ಗೌರವ ನಮನ ಸಲ್ಲಿಸಿದರು.
ಇಂದು ಬೆಳಗ್ಗೆ ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಿದ ಪ್ರಧಾನಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಪ್ರಧಾನಿ ಭೇಟಿಗೆ ಮುನ್ನ ದ್ರಾಸ್ನಲ್ಲಿರುವ ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಭದ್ರತಾ ಉದ್ದೇಶಗಳಿಗೆ ಅನುಗುಣವಾಗಿ ವ್ಯವಸ್ಥೆಗಳನ್ನು ಮಾಡಲಾಗಿದೆ. ನಂತರ ಅಲ್ಲಿರುವ ಮ್ಯೂಸಿಯಂಗೆ ಭೇಟಿ ನೀಡಿದ ಪ್ರಧಾನ ಮಂತ್ರಿಗಳು ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಬಳಸಿರುವ ಮಿಲಿಟರಿ ಉಪಕರಣಗಳು, ಭಾರತೀಯ ಸೇನೆಯ ಯುದ್ಧ ಸಲಕರಣೆಗಳು, ಹುತಾತ್ಮ ಯೋಧರ ಛಾಯಾಚಿತ್ರಗಳನ್ನು ವೀಕ್ಷಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ 25 ನೇ ಕಾರ್ಗಿಲ್ ವಿಜಯ ದಿನ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಸೈನಿಕರಿಗೆ ಶ್ರದ್ಧಾಂಜಲಿ ಅರ್ಪಿಸಿದರು.