ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ. ಬೀದರ್ನಲ್ಲಿ ಎಸ್ಬಿಐ ಮುಖ್ಯ ಕಚೇರಿ ಮುಂದೆ ಗುರುವಾರ ಈ ಘಟನೆ ನಡೆದಿದೆ.ಬೆಳಿಗ್ಗೆ ಸುಮಾರು 10:30 ಗಂಟೆಗೆ ಎಸ್ಬಿಐ ಬ್ಯಾಂಕಿನಿಂದ ಹಣ ತೆಗೆದುಕೊಂಡು ಎಟಿಎಂಗೆ ಹಾಕಲು ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ತೆರಳುತ್ತಿದ್ದರು. ಆದರೆ ಎಟಿಎಂ ಸಿಬ್ಬಂದಿಯಿಂದಲೇ 93 ಲಕ್ಷ ರೂ. ದರೋಡೆ.
ಬೈಕ್ ಮೇಲೆ ಹೆಲ್ಮೆಟ್ ಹಾಕಿಕೊಂಡು ಬಂದ ದುಷ್ಕರ್ಮಿಗಳಿಬ್ಬರು ಸಿಬ್ಬಂದಿಗಳ ಕಣ್ಣಿಗೆ ಖಾರದ ಪುಡಿ ಎರಚಿ, ಗುಂಡು ಹಾರಿಸಿ ಹಣದ ಸಮೇತ ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಗುಂಡಿನ ದಾಳಿ ಪರಿಣಾಮ ಗಾಯಗೊಂಡಿದ್ದ ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಇಬ್ಬರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.
ಎಸ್ಬಿಐ ಬ್ಯಾಂಕ್ ಸಿಬ್ಬಂದಿ ಜಿಎಸ್’ಸಿ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳು, ಏಕಾಏಕಿ ಐದು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಹಾಗೂ ನ್ಯಾಯಾಲಯದ ಮಧ್ಯದಲ್ಲಿರುವ ಎಸ್ಬಿಐ ಬ್ಯಾಂಕ್ ಮುಂಭಾಗ ನಡೆದಿದೆ. ಪರಿಣಾಮ ಗುಂಡಿನ ದಾಳಿಯಲ್ಲಿ ಗಿರೀಶ್ ಎಂಬಾತ ಮೃತಪಟ್ಟಿದ್ದು, ಶಿವಕುಮಾರ್ ಎಂಬುವವರಿಗೆ ಗಂಭೀರವಾದ ಗಾಯಗಳಾಗಿವೆ.
ಗುಂಡಿನ ದಾಳಿಯಲ್ಲಿ ಗಿರೀಶ್ ಎಂಬಾತ ಮೃತಪಟ್ಟಿದ್ದು, ಶಿವಕುಮಾರ್ ಎಂಬುವವರಿಗೆ ಗಂಭೀರವಾದ ಗಾಯಗಳಾಗಿವೆ. ಗಾಯಗೊಂಡಿದ್ದ ಶಿವಕುಮಾರ್ ಎಂಬುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಂದು ಪೆಟ್ಟಿಗೆಯಲ್ಲಿದ್ದ ಹಣ ದುಷ್ಕರ್ಮಿಗಳು ದೋಚಿಕೊಂಡು ಹೋಗಿದ್ದಾರೆ ಎಂದು ತಿಳಿದು ಬಂದಿದೆ.
ಖರೀಮರು ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್ನಲ್ಲಿ ಸೆರೆಯಾಗಿದೆ. ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಎಟಿಎಂ ಸಿಬ್ಬಂದಿಯಿಂದಲೇ 93 ಲಕ್ಷ ರೂ. ಲೂಟಿ ಐವರ ಬಂಧನ.ಸ್ಥಳಕ್ಕೆ ಧಾವಿಸಿದ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಘಂಟಿ ಸೇರಿದಂತೆ ಹಿರಿಯ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.