ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿದ್ದು, ಇದೀಗ ರಾಜ್ಯಪಾಲರ ನೋಟಿಸ್ ಅನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಮುಡಾ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನೋಟಿಸ್ ಹಿಂಪಡೆಯುವಂತೆ ಒತ್ತಾಯಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗೇ ಇನ್ನೊಂದು ಈ ಬಗ್ಗೆ ಕಾನೂನು ಹೋರಾಟ ನಡೆಸಲು ಸಹ ಸಂಪುಟ ಸಭೆಯಲ್ಲಿ ನಿರ್ಣಯವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾತ್ರವಿದೆ ಎಂದು ನೀಡಿದ ಬೆನ್ನಲ್ಲಿಯೇ ರಾಜ್ಯಪಾಲರಿಂದ ನೊಟೀಸ್ ಜಾರಿ ಮಾಡಲಾಗಿತ್ತು. ಆದರೆ, ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಎದುರಿಸಬೇಕಿದ್ದ ಹಿನ್ನೆಲೆಯಲ್ಲಿ ಅವರನ್ನು ಹೊರಗಿಟ್ಟು ಸಚಿವ ಸಂಪುಟ ಸಭೆ ನಡೆಸಿದ್ದು, ಈ ಎರಡು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯಪಾಲ ಹಾಗೂ ಸರ್ಕಾರದ ನಡುವಿನ ಕಾನೂನು ಸಂಘರ್ಷ ಶುರುವಾಗುವ ಸಾದ್ಯತೆಗಳಿವೆ.