ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಇದೇ ಜುಲೈ 31ಕ್ಕೆ ನಿವೃತ್ತಿಯಾಗುತ್ತಿದ್ದು, ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಎಚ್ ಕೆ ಪಾಟೀಲ್ ಅವರು, ರಾಜ್ಯ ಸರ್ಕಾರದ ಮುಂದಿನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ ಎಂದರು.
ಹಾಲಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಇನ್ನು ಐದು ದಿನದಲ್ಲಿ ನಿವೃತ್ತಿ ಆಗುತ್ತಾರೆ. ಹೀಗಾಗಿ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ರನ್ನು ನೇಮಿಸಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಎಚ್ ಕೆ ಪಾಟೀಲ್ ಅವರು ಮಾಹಿತಿ ನೀಡಿದರು. ಇದರೊಂದಿಗೆ ಪತಿ ನಿವೃತ್ತಿ ಬೆನ್ನಲ್ಲೇ ಅದೇ ಹುದ್ದೆ ಪತ್ನಿ ಶಾಲಿನಿ ರಜನೀಶ್ಗೆ ಸಿಗುತ್ತಿದೆ.