ಸೋಮವಾರದ ಒಳಗೆ ಬರ ಪರಿಹಾರ ಬಿಡುಗಡೆ ಮಾಡ್ತೇವೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ಗೆ ಹೇಳಿದೆ. ಕರ್ನಾಟಕಕ್ಕೆ ಬರ ಪರಿಹಾರ ನಿಧಿ ಬಂದಿಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ನ ನ್ಯಾ.ಬಿ.ಆರ್ ಗವಾಯಿ ನೇತೃತ್ವದಲ್ಲಿ ದ್ವಿಸದಸ್ಯ ಪೀಠ ಇಂದು ಅರ್ಜಿ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ವಾದ ಮಂಡಿಸಿದರು.
ಬರ ಪರಿಹಾರ ಸಂಬಂಧ ಚುನಾವಣಾ ಆಯೋಗದ ಅನುಮತಿ ಕೇಳಿದ್ದೇವೆ. ಕೆಲವೇ ದಿನಗಳಲ್ಲಿ ಸಮಸ್ಯೆ ಬಗೆಹರಿಯಬಹುದು. ಸೋಮವಾರ ಒಳಗೆ ಬರ ಪರಿಹಾರ ಬಿಡುಗಡೆ ಮಾಡ್ತೇವೆ ಎಂದು ಕೇಂದ್ರ ಸರ್ಕಾರದ ಪರ ಅಟಾರ್ನಿ ಜನರಲ್ ವೆಂಕಟರಮಣಿ ನ್ಯಾಯ ಪೀಠಕ್ಕೆ ಹೇಳಿದರು. ಇನ್ನು ಹಿರಿಯ ವಕೀಲರ ಅಲಭ್ಯತೆ ಹಿನ್ನೆಲೆಯಲ್ಲಿ ವಿಚಾರಣೆ ಮುಂದೂಡುವಂತೆ ರಾಜ್ಯ ಸರ್ಕಾರದ ಪರ ವಕೀಲರು ಕೇಳಿಕೊಂಡರು. ವಾದ – ಪ್ರತಿವಾದವನ್ನು ಆಲಿಸಿದ ದ್ವಿಸದಸ್ಯ ನ್ಯಾ.ಪೀಠ ವಿಚಾರಣೆಯನ್ನು ಏಪ್ರೀಲ್ 29ಕ್ಕೆ ಮೂಂದೂಡಿದೆ.