ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಹುಟ್ಟೂರಿಗೆ ಪಾರ್ಥಿವ ಶರೀರ ರವಾನೆ ಮಾಡಲಾಗುತ್ತದೆ. ಕೆಂಗೇರಿ ಬಿಡದಿ, ರಾಮನಗರ, ಚನ್ನಪಟ್ಟಣದಲ್ಲಿ ಅಂತಿಮ ದರ್ಶನಕ್ಕೆ ವಾಹನ ನಿಲುಗಡೆಯಾಗುವ ಸಾಧ್ಯತೆ ಇದೆ. ಮಂಡ್ಯದ ಮದ್ದೂರಿನಲ್ಲೂ ಕೆಲವು ನಿಮಿಷ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ, ವಕ್ಕಲಿಗ ಸಂಪ್ರದಾಯದಾಯದಂತೆ ಸಂಜೆ ಹೊತ್ತಿಗೆ ಅಂತ್ಯಸಂಸ್ಕಾರ ನೆರವೇರಲಿದ್ದು ಎಸ್ಎಂ ಕೃಷ್ಣ ಅಸ್ತಾಂಗತವಾಗಲಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರಾದ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಇಂದು ನಡೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ಬುಧವಾರ ಸ್ವಯಂ ಪ್ರೇರಿತ ಮದ್ದೂರು ಬಂದ್ಗೆ ಕರೆ ನೀಡಿವೆ. ಒಕ್ಕಲಿಗ ಸಂಘ, ದಲಿತ ಸಂಘಟನೆಗಳು, ಬಾರ್ & ರೆಸ್ಟೋರೆಂಟ್ ಮಾಲೀಕರ ಸಂಘ ಸೇರಿದಂತೆ ಹಲವು ಸಂಘಟನೆಗಳು ಬಂದ್ಗೆ ಬೆಂಬಲವನ್ನು ಸೂಚಿಸಿವೆ. ಬಂದ್ ಮೂಲಕ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸಲ್ಲಿಸಲು ಸಂಘಟನೆಗಳು ನಿರ್ಧಾರ ಮಾಡಿದ್ದಾರೆ.