ಕರ್ನಾಟಕ ರಾಜ್ಯದ ಹಿರಿಯ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವ, ಸಹೃದಯಿ ಎಸ್.ಎಂ. ಕೃಷ್ಣ ಅವರು ಇಂದು ಬೆಳಗ್ಗೆ 2:30ಕ್ಕೆ ವಿಧಿವಶರಾಗಿದ್ದಾರೆ.
ಮಂಗಳವಾರ ನಸುಕಿನ ಜಾವ 2 ಗಂಟೆಗೆ ಕೃಷ್ಣ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಉಸಿರಾಟದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ವೈದ್ಯರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದರು. ಕೂಡಲೇ ವೈದ್ಯರ ಮನೆಗೆ ಆಗಮಿಸಿದ್ದರು. ಬೆಳಗ್ಗೆ 2:30ಕ್ಕೆ ವೈದ್ಯರು ಎಸ್ಎಂ ಕೃಷ್ಣ ಮೃತಪಟ್ಟ ಬಗ್ಗೆ ಮಾಹಿತಿ ನೀಡಿದ್ದಾರೆ. ಇಂದು ಬೆಳಗ್ಗೆ ಮನೆಯಿಂದ ಚೆಕಪ್ಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಕುಟುಂಬಸ್ಥರು ನಿರ್ಧಾರ ಮಾಡಿದ್ದರು. ಆದರೆ ನಸುಕಿನ ಜಾವವೇ ವಿಧಿವಶರಾಗಿದ್ದಾರೆ ರಾಜ್ಯದ ಸಿಲಿಕಾನ್ ಸಿಟಿಯ ರುವಾರಿ.
ಇಂದು ಸದಾಶಿವನಗರದ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 1 ಗಂಟೆಯ ಬಳಿಕ ಹುಟ್ಟೂರು ಮದ್ದೂರಿಗೆ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.