ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಹಾಗೂ ಧರ್ಮಸ್ಥಳದ ಕುರಿತಂತೆ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ತಿಳಿಸಿದೆ. ಒಂದು ವೇಳೆ ಮಾನಹಾನಿಕಾರಕ ಹೇಳಿಕೆ ಎಂದು ಕಂಡು ಬಂದರೆ ಪೊಲೀಸರು ಕಾನೂನು ಕ್ರಮ ಜರುಗಿಸಬೇಕೆಂದು ಕೋರ್ಟ್ ನಿರ್ದೇಶನ ನೀಡಿದೆ.
ಸೋಮವಾರ, ನ್ಯಾ. ಆರ್. ದೇವದಾಸ್ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೇ ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ, ಅವರ ಕುಟುಂಬ ,ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಯಾವುದೇ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಆದೇಶಿಸಿದೆ. ಮಾನ್ಯ ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ , ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್ ತೀವ್ರವಾಗಿ ಪರಿಗಣಿಸಿದೆ.
ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತಿತರರು ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ಧ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೆ, ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ಹೈಕೋರ್ಟ್ ಗಂಭೀರವಾಗಿ ಪರಿಗಣಿಸಿ, ಈ ಆದೇಶ ನೀಡಿದೆ. ಅರ್ಜಿ ವಿಚಾರಣೆ ವೇಳೆ ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆ ಸರಿಪಡಿಸಿಕೊಂಡಿಲ್ಲ.
ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹಚರರು ಯಾವುದೇ ಸಾಮಾಜಿಕ ಜಾಲತಾಣ, ಸಭೆ, ಸಮಾರಂಭಗಳಲ್ಲಿ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳ ವಿಚಾರದಲ್ಲಿ ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ ಮಾಡಿದಲ್ಲಿ ಕಾನೂನು ರೀತಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆದೇಶ ನೀಡಿದೆ.
ಇನ್ನು ಮಹೇಶ್ ಶೆಟ್ಟಿ ತಿಮರೋಡಿ ಅವರು ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರ ಬಗ್ಗೆ ತಮಗೇನಾದರೂ ದೂರು ಇದ್ದಲ್ಲಿ, ಆ ಬಗ್ಗೆ ಕಾನೂನಿನ ಅಡಿ ಪರಿಹಾರ ಕ್ರಮ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.
ಗ್ಯಾರಂಟಿ ನ್ಯೂಸ್ ವಾಟ್ಸಾಪ್ ಚಾನೆಲ್ ಫಾಲೋ ಮಾಡಿ:https://whatsapp.com/channel/0029VafyCqRFnSzHn1JWKi1B
ಜೊತೆಯಲ್ಲೇ ಗ್ಯಾರಂಟಿ ನ್ಯೂಸ್ ಸಮುದಾಯವನ್ನು ಸೇರಲು ಈ ಲಿಂಕ್ ಕ್ಲಿಕ್ಕಿಸಿ: https://chat.whatsapp.com/HWayJDSBf9aI06q6jplPgc