ಸಿದ್ದರಾಮಯ್ಯ ಅವರು ಮುಂದಿನ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿಯೇ ಮುಂದುವರಿಯುತ್ತಾರೆ. ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಮುಖ್ಯಮಂತ್ರಿ ಬದಲಾವಣೆ ಮಾಡುತ್ತೇನೆ ಎಂದವರು ಯಾರು? ಈಗ ಯಾರು ಚರ್ಚೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದ ಅವರು, ಮುಂದೆ ಅವಕಾಶ ಸಿಕ್ಕರೆ ಮಾತನಾಡೋಣ. ಸದ್ಯಕ್ಕೆ ದಲಿತ ಮುಖ್ಯಮಂತ್ರಿ ಹುದ್ದೆ ಅಥವಾ ಬೇರೆ ಯಾವುದೇ ಕಾರಣಕ್ಕೂ ಬದಲಾವಣೆ ಇಲ್ಲ ಎಂದರು.