ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಮಂಗಳೂರು 7 ಸೆಂಮೀ, ಹಾವೇರಿ 7 ಸೆಂಮೀ, ದಾವಣಗೆರೆ 9 ಸೆಂ,ಮೀ ಹಾಗೂ ತುಮಕೂರಲ್ಲಿ 7 ಸೆಂಮೀ ಮಳೆಯಾಗಿದೆ ಎಂದು ಹವಾಮಾನ ತಜ್ಞರಾದ ಸಿಎಸ್ ಪಾಟೀಲ್ ಹೇಳಿದ್ದಾರೆ.
ವಾಯುಭಾರ ಕುಸಿತ ದುರ್ಬಲಗೊಂಡಿದೆ. ಆಂಧ್ರಪ್ರದೇಶದ ಕರಾವಳಿಯಲ್ಲಿ ಸರ್ಕ್ಯುಲೇಷನ್ ಇದೆ. ಇದರ ಪ್ರಭಾವದಿಂದ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 17 ರಿಂದ ಅಕ್ಟೋಬರ್ 21 ರವರೆಗೆ ಹಲವು ಕಡೆ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆಯಿದೆ.