ರಾಜ್ಯದಲ್ಲಿ ಈಗಾಗಲೇ ಮಳೆಯ ಆರ್ಭಟ ಜೋರಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಯಾವೆಲ್ಲಾ ಭಾಗಕ್ಕೆ ಇಂದು ಹೈ ಅಲರ್ಟ್ ಇದೆ:
ಯಾದಗಿರಿ, ವಿಜಯಪುರ, ಕಲಬುರಗಿ, ಬೀದರ್ಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಮೈಸೂರು, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ. ಸದ್ಯ ಬೆಂಗಳೂರಿನಲ್ಲಿ ಹಲವು ಕಡೆ ಮಳೆಯಾಗಿದೆ. ಇನ್ನೂ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಜುಲೈ ತಿಂಗಳಲ್ಲಿ 49% ರಷ್ಟು ಅಧಿಕ ಮಳೆಯಾಗಿದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶದಲ್ಲಿ 50% ಗೂ ಹೆಚ್ಚು ಮಳೆಯಾಗಿದೆ. ಈಗಾಗಲೇ ಮುಂಗಾರು ಮಳೆ ಅರ್ಧದಷ್ಟು ಮುಗಿದಿದ್ದು, ಒಟ್ಟಾರೆ ರಾಜ್ಯದಲ್ಲಿ 27 ರಿಂದ 28% ರಷ್ಟು ಜಾಸ್ತಿ ಮಳೆಯಾಗಿದೆ. ಇನ್ನು ಆಗಸ್ಟ್ ಹಾಗೂ ಸೆಪ್ಟೆಂಬರ್ ನಲ್ಲಿ ಅಧಿಕ ಮಳೆಯಾಗುವ ಮುನ್ಸೂಚನೆ ಇದ್ದು, ಗುಡ್ಡ ಕುಸಿತಗಳು ಜಾಸ್ತಿ ಆಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರದ ಮಾಜಿ ನಿರ್ದೇಶಕ ಡಾ. ಜಿ ಎಸ್ ಶ್ರೀನಿವಾಸ್ ರೆಡ್ಡಿ ತಿಳಿಸಿದ್ದಾರೆ.