ಕರ್ನಾಟಕದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಹೊಸ ರಸ್ತೆಗಳ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರ 2024-25ರ ಅವಧಿಗೆ 8,021 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಕೂಡಲೇ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾಮಗಾರಿಗಳಿಗೆ ಚಾಲನೆ ನೀಡುವ ಜವಾಬ್ದಾರಿ ರಾಜ್ಯ ಸರ್ಕಾರದ ಮೇಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ 2024-25ರ ಅವಧಿಗೆ ರಾಜ್ಯದ ಒಟ್ಟು 470 ಕಿಲೋಮೀಟರ್ ರಸ್ತೆ ಅಭಿವೃದ್ಧಿಗಾಗಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯದಿಂದ 8006 ಕೋಟಿ ರೂಪಾಯಿ ಮಂಜೂರು ಮಾಡಿದೆ. ಅದಲ್ಲದೇ ಹೊಸದಾಗಿ 459 ಕಿ.ಮೀ ಉದ್ದದ ಹೊಸ ರಸ್ತೆ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿಯನ್ನು ಸಿದ್ದಪಡಿಸಲು 15 ಕೋಟಿ ರೂಪಾಯಿ ಮಂಜೂರು ಮಾಡಿದೆ ಎಂದು ಜೋಶಿ ತಿಳಿಸಿದ್ದಾರೆ.