ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಕೆಲ ಜಿಲ್ಲೆಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಮಳೆಯಾಗುತ್ತಿದ್ದರಿಂದ ಬಹುತೇಕ ಜಲಾಶಯಗಳು ಧುಮ್ಮಿಕ್ಕಿ ಹರಿಯುತ್ತಿದೆ. ರಾಜ್ಯದ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಿರುವುದರಿಂದ ರಾಜ್ಯದ ಪ್ರಮುಖ 14 ಜಲಾಶಯಗಳ ಪೈಕಿ 8 ಡ್ಯಾಂಗಳು ಬಹುತೇಕ ಭರ್ತಿಯಾಗಿವೆ. ಕೆಲವು ಜಲಾಶಯ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೆ ಬೆಳಗಾವಿ ಜಿಲ್ಲೆಯ ಗೋಕಾಕ್, ಚಿಕ್ಕೋಡಿ, ಅಥಣಿ ತಾಲೂಕಿನ ಗ್ರಾಮಗಳಲ್ಲಿ ಕೃಷ್ಣಾ, ಘಟಪ್ರಭಾ ನದಿಗಳ ನೀರು ನುಗ್ಗಿದೆ. ಹಾಗಾದರೆ ಕರ್ನಾಟಕದ ಪ್ರಮುಖ 14 ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟ ವಿವರ ಇಲ್ಲಿದೆ.