- ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ
- ಜೂನ್ 26 ರವರೆಗೆ ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇದರಿಂದ ಕೃಷಿ ಚಟುವಟಿಕೆಗಳು ಗರಿಗೆದರಿದೆ. ಈ ಮಧ್ಯೆ ಮಳೆ ಇನ್ನಷ್ಟು ಜೋರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಜೂನ್ 26 ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್22 ರಿಂದ 26 ರವರೆಗೆ ಕರಾವಳಿ ಜಿಲ್ಲೆಗಳಿಗೆ ಭಾರೀ ಮಳೆ ಹಾಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಧಾರಕಾರ ಮಳೆ ಹಿನ್ನೆಲೆ ಇನ್ನೂ 4 ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನೊಂದೆಡೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆಯುವ ಮುನ್ಸೂಚನೆ ನೀಡಿದೆ. ಆದ್ದರಿಂದ ಜೂನ್ 26 ರವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಅನ್ವಯಿಸುವಂತೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಸನ, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಇಲ್ಲೆಲ್ಲ ಭರ್ಜರಿ ಮಳೆ ಸುರಿಯುವ ಮುನ್ಸೂಚನೆ ಇವೆ.