ರಾಜ್ಯಾದ್ಯಂತ ಇಂದಿನಿಂದ ಚಳಿ ಹೆಚ್ಚಾಗುವ ಸಾಧ್ಯತೆ ಇದ್ದು, ಒಣಹವೆ ಮುಂದುವರೆಯಲಿದೆ. ವಿಜಯನಗರ, ತುಮಕೂರು,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಹಾಗೆಯೇ ಉತ್ತರ ಒಳನಾಡಿನ ಹಾವೇರಿ, ಕಲಬುರಗಿ, ಕೊಪ್ಪಳ,. ರಾಯಚೂರು, ವಿಜಯನಗರ, ಯಾದಗಿರಿ, ಗದಗ, ಬಾಗಲಕೋಟೆಯಲ್ಲಿ ಚಳಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಿದ್ದಾಪುರ, ಹೊಸಕೋಟೆಯಲ್ಲಿ ಕೊಂಚ ಮಳೆಯಾಗಿದೆ. ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದ್ದು, ಎಚ್ಎಎಲ್ನಲ್ಲಿ 23.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 24.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 34.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೀದರ್ನಲ್ಲಿ 27.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 27.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 26.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 30.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 25.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.