ಕಳೆದ ವಾರ ನಡೆದ ಗೆಜೆಟೆಡ್ ಪ್ರೊಬೇಷನರ್ಸ್ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ಹಲವಾರು ರೀತಿಯ ತಪ್ಪುಗಳನ್ನ ಪ್ರಶ್ನೆಪತ್ರಿಕೆಯಲ್ಲಿ ಕೆಪಿಎಸ್ಸಿ ಮಾಡಿತ್ತು . ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ನವರು ಮಹತ್ವದ ನಿರ್ಧಾರವನ್ನ ಕೈಗೊಂಡಿದ್ದಾರೆ.
ಇಂದು ಕೆಪಿಎಸ್ಸಿ ವಿರುದ್ದ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದವು. ಇದರ ಬೆನ್ನಲ್ಲೇ ಈಗ ಸರ್ಕಾರ ಮಣಿದಿದೆ. ಪರೀಕ್ಷಾರ್ಥಿಗಳ ಬೇಡಿಕೆಯಂತೆ ಮರು ಪರೀಕ್ಷೆ ನಡೆಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಎಕ್ಸ್ ಖಾತೆಯಲ್ಲಿ ಮರುಪರೀಕ್ಷೆ ನಡೆಸುವಂತೆ ಕೆಪಿಎಸ್ಸಿ ಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಕೆಪಿಎಸ್ಸಿ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಪರೀಕ್ಷೆಯನ್ನು ಮರುನಿರ್ವಹಿಸುವಂತೆ ಕೆಪಿಎಸ್ಸಿಗೆ ಸೂಚಿಸಿದ್ದೇನೆ. ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಎಲ್ಲಾ ಶ್ರದ್ಧೆಯಿಂದ ಅನುಸರಿಸಿ ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನಮ್ಮ ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.