ಐಬಿಪಿಎಸ್ ಪರೀಕ್ಷೆ ಬರೆಯುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದಆ.25ರಂದು ನಡೆಯಬೇಕಿದ್ದ ಗೆಜೆಟೆಡ್ ಪ್ರೊಬೇಷನರ್ನೇಮಕಾತಿ ಪೂರ್ವಭಾವಿ ಪರೀಕ್ಷೆಯ ದಿನಾಂಕವನ್ನು ಮುಂದೂಡುವಂತೆ ಕೆಪಿಎಸ್ಸಿಗೆ ಸೂಚನೆ ನೀಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಲತಾಣ ʻಎಕ್ಸ್ʼ ನಲ್ಲಿ ತಿಳಿಸಿದ್ದಾರೆ. ಆ.25ರಂದು ಐಬಿಪಿಎಸ್ ಪರೀಕ್ಷೆ ನಿಗದಿಯಾಗಿದೆ. ಅದೇ ದಿನ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆ ನಿಗದಿಯಾಗಿರುವುದರಿಂದ ಸಾವಿರಾರು ಅಭ್ಯರ್ಥಿಗಳು ಯಾವುದಾದರೂ ಒಂದು ಪರೀಕ್ಷೆಯಿಂದ ವಂಚಿತರಾಗುತ್ತಾರೆ. ಹೀಗಾಗಿ, ದಿನಾಂಕ ಮುಂದೂಡುವಂತೆ ಮಾಡಿದ್ದ ಮನವಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ. ಮುಖ್ಯಮಂತ್ರಿಯವರ ಸೂಚನೆ ಹಿನ್ನೆಲೆಯಲ್ಲಿ ಕೆಪಿಎಸ್ಸಿ ಆಯೋಗದ ಸಭೆ ನಡೆಸಿ ಪೂರ್ವಭಾವಿ ಪರೀಕ್ಷೆಗೆ ಬೇರೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ.