ಕೇದಾರನಾಥದ ಬಿಜೆಪಿ ಶಾಸಕಿ ಶೈಲಾ ರಾಣಿ ರಾವತ್ (68) ಮಂಗಳವಾರ ತಡರಾತ್ರಿ ಡೆಹ್ರಾಡೂನ್ನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಅವರು ನಿಧನರಾಗಿರುವುದಾಗಿ ಕುಟುಂಬದ ಮೂಲಗಳು ದೃಢಪಡಿಸಿವೆ. ಬೆನ್ನುಮೂಳೆ ಗಾಯಕ್ಕೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿದ್ದ ರಾವತ್ ಕಳೆದ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ವೆಂಟಿಲೇಟರ್ನಲ್ಲಿದ್ದರು ಎಂದು ವೈದ್ಯರು ತಿಳಿಸಿದ್ದಾರೆ. 2012ರಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದಿದ್ದ ರಾವತ್ ಕೇದಾರನಾಥ ಕ್ಷೇತ್ರದಲ್ಲಿ ಮೊದಲಬಾರಿಗೆ ಗೆದ್ದು ವಿಧಾನಸಭೆ ಪ್ರವೇಶಿಸಿದ್ದರು. 2016 ರಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ವಿರುದ್ಧ ಬಂಡಾಯವೆದ್ದು ಬಿಜೆಪಿ ಸೇರಿದ್ದರು.