ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ವೆಸ್ಟ್ ನೈಲ್ ಫೀವರ್ನ ಐದು ಪ್ರಕರಣಗಳು ಪತ್ತೆಯಾಗಿವೆ. ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೊಳ್ಳೆ ನಿರ್ಮೂಲನಾ ಕಾರ್ಯವನ್ನು ಚುರುಕುಗೊಳಿಸಲಾಗುವುದು ಎಂದು ಆರೋಗ್ಯ ಇಲಾಖೆ ಪ್ರಕಟಿಸಿದೆ. ಕೇರಳದಲ್ಲಿ ಸೋಂಕಿನ ಪ್ರಕರಣ ಪತ್ತೆಯಾಗಿದ್ದು, ಕೋಝಿಕ್ಕೋಡ್ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ರೋಗ ದೃಢಪಟ್ಟಿದೆ.
ರೋಗ ಲಕ್ಷಣ ಕಂಡುಬಂದಿದ್ದವರ ಪ್ರಯೋಗಾಲಯ ಮಾದರಿಯನ್ನಯ ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರಕ್ಕೆ ಕಳುಹಿಸಲಾಗಿತ್ತು. ಈಗ ಅದರ ವರದಿ ಬಂದಿದ್ದು, ಐವರು ವರಸ್ಟ್ ನೈಲ್ ಜ್ವರದಿಂದ ಬಳಲುತ್ತಿರುವುದು ಗೊತ್ತಾಗಿದೆ. ಈ ಜ್ವರ ಸೊಳ್ಳೆಗಳಿಂದ ಹರಡುತ್ತದೆ ಎಂದು ಅವರು ಹೇಳಿದ್ದಾರೆ. ಆದರೆ ವೆಸ್ಟ್ ನೈಲ್ ಜ್ವರ ವಯಸ್ಕರ ಮೇಲೆ ಪರಿಣಾಮ ಬೀರುತ್ತದೆ.